೧.ಅಲಂಕಾರ ಪ್ರಸ್ಥಾನ : ಇದರಲ್ಲಿ ಪ್ರಮುಖ ಅಲಂಕಾರಿಕನಾದ ಭಾಮಹನನ್ನು ಮುಖ್ಯವಾಗಿಟ್ಟುಕೊಂಡು ಅಲಂಕಾರ ಪ್ರಸ್ಥಾನದ ಸಾಮಾನ್ಯ ಸಮೀಕ್ಷೆಯನ್ನು ಮಾಡಲಾಗಿದೆ.
೨.ಶಬ್ದಾಲಂಕಾರಗಳು : ಇದರಲ್ಲಿ ಪ್ರಮುಖವಾಗಿ ಅನುಪ್ರಾಸ ಯಮಕ ಮತ್ತು ಚಿತ್ರಕವಿತ್ವಗಳ ಬಗ್ಗೆ ಹೇಳಲಾಗುತ್ತದೆ.
೩.ಅರ್ಥಾಲಂಕಾರಗಳು : ಇದರಲ್ಲಿ ಎಂಟು ಪ್ರಮುಖ ಅಲಂಕಾರಗಳಾದ - ಉಪಮೆ, ದೀಪಕ, ರೂಪಕ, ಉತ್ಪ್ರೇಕ್ಷೆ, ಅರ್ಥಾಂತರನ್ಯಾಸ, ಶ್ಲೇಷೆ, ಅತಿಶಯೋಕ್ತಿ ಮತ್ತು ಸ್ವಭಾವೋಕ್ತಿಗಳ ಸಂಕ್ಷಿಪ್ತ ಪರಿಚಯವನ್ನು ಮಾಡಿಕೊಡಲಾಗುತ್ತದೆ.
********ಅಲಂಕಾರ ಪ್ರಸ್ಥಾನ********
(ಕಾವ್ಯವನ್ನು ಕುರಿತು ಚರ್ಚಿಸುವಾಗ ವಿಶಾಲ ಅರ್ಥವನ್ನು ಬಯಸಿ, ರಸವನ್ನುಅಲಂಕಾರವೆಂದೆ ಪರಿಗಣಿಸಿ, ಕಾವ್ಯದಲ್ಲಿ ಅಲಂಕಾರಗಳೇ ಮುಖ್ಯವವೆಂದು ಪ್ರತಿಪಾದಿಸಿದ ಕಾವ್ಯಮೀಮಾಂಸಕರಾದ ಭಾಮಹ, ಉದ್ಬಟ, ರುದ್ರಟ, ಜಯದೇವ ಮೊದಲಾದವರ ಒಟ್ಟು ಚರ್ಚೆಯನ್ನು 'ಅಲಂಕಾರ ಪ್ರಸ್ಥಾನ'ವೆಂದು ಕರೆಯಬಹುದು. ಅಲಂಕಾರ ಪ್ರಸ್ಥಾನದ ಪ್ರಭಾವವೂ ಗಾಢವಾಗಿದ್ದ ಕಾವ್ಯಮೀಮಾಂಸೆಯನ್ನು 'ಅಲಂಕಾರ ಶಾಸ್ತ್ರ'ವೆಂದು ಹೇಳಲಾಗುತ್ತದೆ.
ಭಾರತೀಯ ಕಾವ್ಯಮೀಮಾಂಸೆಯ ಪ್ರಮುಖ ಅಲಂಕಾರಿಕನಾದ ಭಾಮಹನು "ಕಾವ್ಯಾಲಂಕಾರ" ಎಂಬ ಕೃತಿಯನ್ನು ರಚಿಸಿದ್ದಾನೆ. ಇದರ ಮೊದಲ ಪರಿಚ್ಛೇದದಲ್ಲಿ ಕಾವ್ಯದ ಲಕ್ಷಣ, ಪ್ರಯೋಜನ, ವಿಭಾಗ ಈ ಮೊದಲಾದ ಸಾಮಾನ್ಯ ವಿಚಾರವೂ, ಎರಡು, ಮೂರನೇ ಪರಿಚ್ಛೇದದಲ್ಲಿ ಸುಮಾರು ೪೦ ಅಲಂಕಾರಗಳ ನಿರೂಪಣೆಯೂ, ನಾಲ್ಕನೆಯದರಲ್ಲಿ ೧೦ ಕಾವ್ಯ ದೋಷಗಳನ್ನೂ, ಐದನೆಯದರಲ್ಲಿ ನ್ಯಾಯಶಾಸ್ತ್ರಕ್ಕೆ ಸಂಬಂಧಿಸಿದ ಕೆಲವು ದೋಷಗಳ ವಿಷಯವೂ, ಆರನೆಯದರಲ್ಲಿ ಶಬ್ದಶುದ್ಧಿಯನ್ನು ಕುರಿತ ಕೆಲವು ಸೂಚನೆಗಳು ಬಂದಿವೆ.
ಇವುಗಳಲ್ಲಿ ವಸ್ತುತಃ ತರ್ಕ ವ್ಯಾಕರಣಗಳಿಗೆ ಸೇರತಕ್ಕ ಕೊನೆಯ ಎರಡು ಪರಿಚ್ಛೇದಗಳನ್ನು ಬಿಟ್ಟರೆ, ಅಲಂಕಾರಗಳ ನಿರೂಪಣೆಯೇ ಭಾಮಹನ ಗ್ರಂಥದ ಪ್ರಧಾನ ವಿಷಯ. ಇವನು ರಸಕ್ಕೆ ಹೆಚ್ಚಿನ ಸ್ಥಾನವನ್ನೇನೂ ಕೊಟ್ಟಿಲ್ಲ. ಶೃಂಗಾರಾದಿ ರಸಗಳನ್ನು ಸ್ಪಷ್ಟವಾಗಿ ದರ್ಶಿಸಿದ್ದರೆ ರಸವದಲಂಕಾರವಾಗುವುದೆಂದು ಹೇಳಿ ಮುಗಿಸುತ್ತಾನೆ.
ಭಾಮಹನ ಮತದಂತೆ ಎಲ್ಲ ಕಾವ್ಯವೂ ಅದು ಮಹಾಕಾವ್ಯವಾಗಿರಲಿ, ಮುಕ್ತವಾಗಿರಲಿ 'ವಕ್ರೋಕ್ತಿ' ಯಿಂದ ಕೂಡಿರಬೇಕು. ಕಾವ್ಯದ ಶಬ್ದದಲ್ಲಿಯೂ ಲೋಕರೂಢಿಗೆ ಮೀರಿದ ಒಂದು ಅತಿಶಯವಿರುವುದೇ ಅತಿಶಯೋಕ್ತಿ ಅಥವಾ ವಕ್ರೋಕ್ತಿ. ವಕ್ರೋಕ್ತಿಯಿಲ್ಲದೆ ಅಲಂಕಾರವಿಲ್ಲ. ಸ್ವಭಾವೋಕ್ತಿಯನ್ನು ಕೆಲವರು ಮಾತ್ರ ಅಲಂಕಾರವೆಂದು ಕರೆಯುತ್ತಾರೆ.)
********ಶಬ್ದಾಲಂಕಾರಗಳು********
೧.ಅನುಪ್ರಾಸ :
ಅಂದರೆ ಅಕ್ಷರಗಳ ಆವೃತ್ತಿ. ಇದರಲ್ಲಿ ಒಂದೊ, ಎರಡೊ. ಮೂರೊ ಅಕ್ಷರಗಳು ಮತ್ತೆ ಮತ್ತೆ ಬಂದರೆ ಅದನ್ನು "ವೃತ್ತ್ಯಾನುಪ್ರಾಸ" ಎನ್ನುತ್ತಾರೆ. ಎರಡು ಅಕ್ಷರಗಳು ಜತೆಜತೆಯಾಗಿ ಹಲವು ಕಡೆ ಬಂದರೆ, ಅದನ್ನು "ಛೇಕಾನುಪ್ರಾಸ" ಎನ್ನುವರು.
೨.ಯಮಕ :
ಮೂರು ಅಥವಾ ಅದಕ್ಕಿಂತ ಹೆಚ್ಚಿನ ಅಕ್ಷರಗಳುಳ್ಳ ಪದವೋ, ಒಂದು ಪದ್ಯದ ಆದಿ, ಮಧ್ಯ, ಅಂತ್ಯದಲ್ಲಿ ನಿಯತವಾಗಿ ಪುನಃ ಪುನಃ ಬಂದರೆ ಅದಕ್ಕೆ ಯಮಕ ಎನ್ನುತ್ತಾರೆ.
೩.ಚಿತ್ರಕವಿತ್ವ :
ಅಕ್ಷರಗಳನ್ನು, ಪದಗಳನ್ನು ಕುಶಲತೆಯಿಂದ ಆರಿಸಿ ಜೋಡಿಸಿ ಕವಿಗಳು ಉಂಟುಮಾಡುವ ಇತರ ಶಬ್ದ ವೈಚಿತ್ರಕ್ಕೆ 'ಚಿತ್ರಕವಿತ್ವ' ಎನ್ನುತ್ತಾರೆ. ಇದನ್ನು ಶಬ್ದವೈಖರಿ, ಅಭ್ಯಾಸಬಲ, ಬುದ್ಧಿ ಸಾಮರ್ಥ್ಯ ಇವು ಇದ್ದ ಹಾಗೆಲ್ಲಾ ಕಲ್ಪಿಸಿ ರಚಿಸಬಹುದು.
********ಅರ್ಥಾಲಂಕಾರಗಳು********
ಉಪಮಾಲಂಕಾರ
ಪೂರ್ಣೋಪಮೆ- ಸೀತೆಯ ಮುಖ ಕಮಲದಂತೆ ಸುಂದರವಾಗಿದೆ -
ಲುಪ್ತೋಪಮೆ- ಸೀತೆಯ ಮುಖ ಕಮಲದಂತೆ ಇದೆ
ರೂಪಕಾಲಂಕಾರ
ಅಭೇದ - ಸೀತೆಯ ಮುಖ ಕಮಲ
ತದ್ರೂಪ್ಯ
ಉತ್ಪ್ರೇಕ್ಷಾಲಂಕಾರ
ಸೀತೆಯ ಮುಖ ಕಮಲವೋ ಎಂಬಂತೆ ಅರಳಿತು
ಅರ್ಥಾಂತರನ್ಯಾಸಾಲಂಕಾರ
(ಒಂದು ವಿಶೇಷ ವಾಕ್ಯವನ್ನು ಸಾಮಾನ್ಯ ವಾಕ್ಯದಿಂದಾಗಲಿ ಅಥವಾ ಸಾಮಾನ್ಯ ವಾಕ್ಯವನ್ನು ವಿಶೇಷ ವಾಕ್ಯದಿಂದಾಗಲಿ ಸಮರ್ಧನೆ ಮಾಡುವುದನ್ನು)
ಉದಾ : ಅಮೀರನು ಉಂಡಮನೆಗೆ ಕೇಡು ಬಗೆದ . ಕೃತಘ್ನರು ಏನನ್ನೂ ಮಾಡುವರು. ಅಮೀರನು ಉಂಡ ಮನೆಗೆ ಕೇಡು ಬಗೆದ. ( ವಿಶೇಷ ವಾಕ್ಯ ) ಕೃತಘ್ನರು ಏನನ್ನೂ ಮಾಡುವರು. ( ಸಾಮಾನ್ಯ ವಾಕ್ಯ ) ಸಮನ್ವಯ : ಇಲ್ಲಿ ಉಪಮಾನವಾದ "ಕೃತಘ್ನರು ಏನನ್ನೂ ಮಾಡುವರು." ( ಸಾಮಾನ್ಯ ವಾಕ್ಯ ) , ಅಮೀರನು ಉಂಡ ಮನೆಗೆ ಕೇಡು ಬಗೆದ ( ವಿಶೇಷ ವಾಕ್ಯ ) ಎಂಬ ಮಾತನ್ನು ಸಮರ್ಥಿಸಲಾಗಿದೆ ಆದ್ದರಿಂದ ಇದು ಅರ್ಥಾಂತರನ್ಯಾಸಾಲಂಕಾರ.
ದೃಷ್ಟಾಂತ
(ಎರಡು ಬೇರೆಬೇರೆ ವಾಕ್ಯಗಳು ಅರ್ಥ ಸಾದೃಶ್ಯದಿಂದ ಒಂದಕ್ಕೊಂದು ಬಿಂಬ ಭಾವದಂತೆ ತೋರುತ್ತಿದ್ದರೆ)
ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ
ಶ್ಲೇಷಾಲಂಕಾರ
(ಒಂದಕ್ಕಿಂತ ಹೆಚ್ಚು ಅರ್ಥಕೊಡುವ ಪದಶಕ್ತಿಗೆ ಶ್ಲೇಷಾ ಎಂದು ಹೆಸರು. ಬೇರೆಬೇರೆ ಅರ್ಥ ನೀಡುವಂತಿದ್ದರೆ)
ಕುರುಕುಲಾರ್ಕನು ಅರ್ಕನು ಅಸ್ತಂಗತರಾದರು
No comments:
Post a Comment